RbiSearchHeader

Press escape key to go back

Past Searches

Page
Official Website of Reserve Bank of India

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

131316560

ಮಂಡ್ಯ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮಂಡ್ಯ, ಕರ್ನಾಟಕ- ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ

‘ನಿಮ್ಮ ಗ್ರಾಹಕರನ್ನು ತಿಳಿಯಿರಿ (KYC)’ - ಇದರ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ನೀಡಿದ ಕೆಲವು ನಿರ್ದೇಶನಗಳ ಅನುಪಾಲನೆ ಮಾಡದೇ ಇದ್ದುದಕ್ಕಾಗಿ ಆರ್ ಬಿ ಐ ತನ್ನ ಡಿಸೆಂಬರ್ 6, 2024 ರ ಆದೇಶದ ಮೂಲಕ ಮಂಡ್ಯ ಸಿಟಿ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮಂಡ್ಯ, ಕರ್ನಾಟಕ- ಈ ಬ್ಯಾಂಕಿಗೆ (ಬ್ಯಾಂಕು) ರೂ. 50,000/- (ರೂ. ಐವತ್ತು ಸಾವಿರ ಮಾತ್ರ) ವಿತ್ತೀಯ ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಏ (1) (ಸಿ) ಜೊತೆ ಓದಲಾದ ಕಲಂ 46(4) (i) ಮತ್ತು 56 ರ ನಿಬಂಧನೆಗಳ ಅಡಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ದಂಡವನ್ನು ವಿಧಿಸಿದೆ.

ಮಾರ್ಚ್ 31, 2023 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ಬ್ಯಾಂಕಿನ ಶಾಸನ ಬದ್ಧ ನಿರೀಕ್ಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಡೆಸಿತು. ಆರ್ ಬಿ ಐ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ ಈ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಕೆಳಕಂಡ ಆರೋಪ ಸ್ಥಿರಪಟ್ಟಿದೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿವೆ ಎಂದು ಗೊತ್ತಾಯಿತು:

ಬ್ಯಾಂಕು ಕೆಲವು ಗ್ರಾಹಕರ ಕೆವೈಸಿ ದಾಖಲೆಗಳನ್ನು ಕೇಂದ್ರೀಯ ಕೆವೈಸಿ ದಾಖಲೆಗಳ ರಿಜಿಸ್ಟ್ರಿ (CKYCR)ಗೆ ನಿಗದಿತ ಸಮಯದೊಳಗೆ ಅಪ್ ಲೋಡ್ ಮಾಡುವಲ್ಲಿ ವಿಫಲವಾಗಿತ್ತು.

ನಿಯಂತ್ರಣ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ.

(ಪುನೀತ್ ಪಾಂಚೋಲಿ)     
ಚೀಫ್ ಜನರಲ್ ಮ್ಯಾನೇಜರ್

ಪತ್ರಿಕಾ ಪ್ರಕಟಣೆ: 2024-2025/1693

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

ನಮ್ಮ ಅಪ್ಲಿಕೇಶನ್ ಅನ್ನು ಸ್ಥಾಪಿಸಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ

RbiWasItHelpfulUtility

ಪೇಜ್ ಕೊನೆಯದಾಗಿ ಅಪ್ಡೇಟ್ ಆದ ದಿನಾಂಕ:

ಈ ಪುಟವು ಸಹಾಯಕವಾಗಿತ್ತೇ?