RbiSearchHeader

Press escape key to go back

Past Searches

Page
Official Website of Reserve Bank of India

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

129694042

ಶ್ರೀ ಮಹಾಬಲೇಶ್ವರ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ.

“ನಿರ್ದೇಶಕರು, ಅವರ ಬಂಧುಗಳು ಮತ್ತು ಅವರು ಹಿತಾಸಕ್ತಿ ಹೊಂದಿರುವ ವ್ಯಾಪಾರೀ ಸಂಸ್ಥೆಗಳಿಗೆ ನೀಡಲಾಗುವ ಸಾಲ ಮತ್ತು ಮುಂಗಡಗಳು”- ಇದರ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ನೀಡಿದ ನಿರ್ದೇಶನಗಳ ಅನುಪಾಲನೆ ಮಾಡದೇ ಇದ್ದುದಕ್ಕಾಗಿ ಆರ್ ಬಿ ಐ ತನ್ನ ಅಕ್ಟೋಬರ್ 29, 2024 ರ ಆದೇಶದ ಮೂಲಕ ಶ್ರೀ ಮಹಾಬಲೇಶ್ವರ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಕರ್ನಾಟಕ ಈ ಬ್ಯಾಂಕಿಗೆ (ಬ್ಯಾಂಕು) ರೂ. 5 ಲಕ್ಷ (ರೂ. ಐದು ಲಕ್ಷ ಮಾತ್ರ) ವಿತ್ತೀಯ ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47ಏ(1)(ಸಿ ) ಜೊತೆ ಓದಲಾದ ಕಲಂ 46(4)(i) ಮತ್ತು 56 ರ ಅಡಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ದಂಡವನ್ನು ವಿಧಿಸಿದೆ.

ಮಾರ್ಚ್ 31, 2023 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಯನ್ನು ಆಧರಿಸಿ ಬ್ಯಾಂಕಿನ ಶಾಸನ ಬದ್ಧ ನಿರೀಕ್ಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಡೆಸಿತು. ಆರ್ ಬಿ ಐ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ ಈ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಈ ಆರೋಪ ಸ್ಥಿರಪಟ್ಟಿದೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿದೆ ಎಂದು ಗೊತ್ತಾಯಿತು:

ಬ್ಯಾಂಕು ನಿರ್ದೇಶಕರ ಬಂಧುಗಳಿಗೆ ಹಲವಾರು ಸಾಲಗಳನ್ನು ಮಂಜೂರು ಮಾಡಿತ್ತು.

ನಿಯಂತ್ರಣ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ.

 

(ಪುನೀತ್ ಪಾಂಚೋಲಿ)     
ಚೀಫ್ ಜನರಲ್ ಮ್ಯಾನೇಜರ್

ಪತ್ರಿಕಾ ಪ್ರಕಟಣೆ: 2024-2025/1447

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

ನಮ್ಮ ಅಪ್ಲಿಕೇಶನ್ ಅನ್ನು ಸ್ಥಾಪಿಸಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ

RbiWasItHelpfulUtility

ಪೇಜ್ ಕೊನೆಯದಾಗಿ ಅಪ್ಡೇಟ್ ಆದ ದಿನಾಂಕ:

ಈ ಪುಟವು ಸಹಾಯಕವಾಗಿತ್ತೇ?