ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ - ಆರ್ಬಿಐ - Reserve Bank of India
ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ
“ಆದಾಯ ಗುರುತಿಸುವಿಕೆ, ಆಸ್ತಿ ವರ್ಗೀಕರಣ, ಅವಕಾಶ ಕಲ್ಪಿಸುವುದು ಮತ್ತು ಇತರ ಸಂಬಂಧಿತ ವಿಷಯಗಳು - ಪಟ್ಟಣ ಸಹಕಾರಿ ಬ್ಯಾಂಕುಗಳು " ಇದರ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ನೀಡಿದ ಕೆಲವು ನಿರ್ದೇಶನಗಳ ಮತ್ತು ಮೇಲ್ವಿಚಾರಣಾ ಕ್ರಿಯಾ ಚೌಕಟ್ಟು (SAF) ಅಡಿಯಲ್ಲಿ ನೀಡಿದ ನಿರ್ದೇಶನಗಳ ಅನುಪಾಲನೆ ಮಾಡದೇ ಇದ್ದುದಕ್ಕಾಗಿ ಆರ್ ಬಿ ಐ ತನ್ನ ನವೆಂಬರ್ 5, 2024 ರ ಆದೇಶದ ಮೂಲಕ ಶ್ರೀ ಚರಣ್ ಸೌಹಾರ್ದ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು - ಈ ಬ್ಯಾಂಕಿಗೆ (ಬ್ಯಾಂಕು) ರೂ. 2 ಲಕ್ಷ (ರೂ. ಎರಡು ಲಕ್ಷ ಮಾತ್ರ) ವಿತ್ತೀಯ ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಏ(1)(ಸಿ ) ಜೊತೆ ಓದಲಾದ ಕಲಂ 46(4) (i) ಮತ್ತು 56 ರ ಅಡಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ದಂಡವನ್ನು ವಿಧಿಸಿದೆ. ಮಾರ್ಚ್ 31,2023 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಯನ್ನು ಆಧರಿಸಿ ಬ್ಯಾಂಕಿನ ಶಾಸನ ಬದ್ಧ ನಿರೀಕ್ಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಡೆಸಿತು. ಮೇಲೆ ಹೇಳಲಾದ ಆರ್ ಬಿ ಐ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ ಈ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಈ ಆರೋಪಗಳು ಸ್ಥಿರಪಟ್ಟಿವೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿವೆ ಎಂದು ಗೊತ್ತಾಯಿತು: ಬ್ಯಾಂಕು-
ನಿಯಂತ್ರಣ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ
(ಪುನೀತ್ ಪಾಂಚೋಲಿ) ಪತ್ರಿಕಾ ಪ್ರಕಟಣೆ: 2024-2025/1451 |