ವಿಶ್ವಕಲ್ಯಾಣ ಸಹಕಾರ ಬ್ಯಾಂಕ್ ನಿಯಮಿತ, ಹುಬ್ಬಳ್ಳಿ, ಕರ್ನಾಟಕ- ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ - ಆರ್ಬಿಐ - Reserve Bank of India
ವಿಶ್ವಕಲ್ಯಾಣ ಸಹಕಾರ ಬ್ಯಾಂಕ್ ನಿಯಮಿತ, ಹುಬ್ಬಳ್ಳಿ, ಕರ್ನಾಟಕ- ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ
ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 31 ರ ಜೊತೆ ಓದಲಾದ ಕಲಂ 56 ರ ನಿಬಂಧನೆಗಳ ಉಲ್ಲಂಘನೆಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ತನ್ನ ಮೇ 6, 2025 ರ ಆದೇಶದ ಮೂಲಕ ವಿಶ್ವಕಲ್ಯಾಣ ಸಹಕಾರ ಬ್ಯಾಂಕ್ ನಿಯಮಿತ, ಹುಬ್ಬಳ್ಳಿ, ಕರ್ನಾಟಕ - ಈ ಬ್ಯಾಂಕಿಗೆ (ಬ್ಯಾಂಕು) ರೂ. 50,000/- ( ರೂ. ಐವತ್ತು ಸಾವಿರ ಮಾತ್ರ ) ವಿತ್ತೀಯ ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಎ(1)(ಸಿ) ಜೊತೆ ಓದಲಾದ ಕಲಂ 46(4)(i) ಮತ್ತು 56 ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಈ ದಂಡವನ್ನು ವಿಧಿಸಿದೆ. ಶಾಸನಬದ್ಧ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮದ ಶಾಸನಬದ್ಧ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಕೆಳಕಂಡ ಆರೋಪ ಸ್ಥಿರಪಟ್ಟಿದೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿದೆ ಎಂದು ಗೊತ್ತಾಯಿತು: ಬ್ಯಾಂಕು ಗೊತ್ತುಪಡಿಸಿದ ಕಾಲಾವಧಿಯೊಳಗೆ ಭಾರತೀಯ ರಿಸರ್ವ್ ಬ್ಯಾಂಕಿಗೆ ಶಾಸನಬದ್ಧ ರಿಟರ್ನ್ಸ್ ಗಳನ್ನುಸಲ್ಲಿಸುವಲ್ಲಿ ವಿಫಲವಾಗಿತ್ತು. ಶಾಸನಬದ್ಧ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ. (ಪುನೀತ್ ಪಾಂಚೋಲಿ) ಪತ್ರಿಕಾ ಪ್ರಕಟಣೆ: 2025-2026/287 |