ಮರಾಠಾ ಸಹಕಾರಿ ಬ್ಯಾಂಕ್ ಲಿಮಿಟೆಡ್ , ಮಹಾರಾಷ್ಟ್ರ-ಇದಕ್ಕೆ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949(ಎ ಎ ಪಿ ಎಸ್) ರ ಪ್ರಕರಣ 35 A ರ ಅಡಿಯಲ್ಲಿ ನಿರ್ದೇಶನ
ಆಗಸ್ಟ್ 31, 2017 ಮರಾಠಾ ಸಹಕಾರಿ ಬ್ಯಾಂಕ್ ಲಿಮಿಟೆಡ್ , ಮಹಾರಾಷ್ಟ್ರ-ಇದಕ್ಕೆ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ ಭಾರತೀಯ ರಿಜರ್ವ್ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949(ಎ ಎ ಪಿ ಎಸ್) ರ ಪ್ರಕರಣ 35 A ರ ಅಡಿಯಲ್ಲಿ ಮರಾಠಾ ಸಹಕಾರಿ ಬ್ಯಾಂಕ್ ಲಿಮಿಟೆಡ್ , ಮಹಾರಾಷ್ಟ್ರ-ಇದಕ್ಕೆ ಆಗಸ್ಟ್ 31, 2016 ರಿಂದ ಫೆಬ್ರವರಿ 28, 2017 ರ ವರೆಗೆ ಆರು ತಿಂಗಳ ಕಾಲಾವಧಿಗೆ ನಿರ್ದೇಶನ ನೀಡಿ ಮತ್ತೆ ಆರು ತಿಂಗಳ ಅವಧಿಗೆ ಅಂದರೆ ಆಗಸ್ಟ್ 31, 2017 ರ ವರೆಗೆ ವಿಸ್ತರಿಸಲಾಗಿದ್ದ ನಿರ್ದೇಶನವನ್ನು ಹೆಚ್ಚುವರಿ ಆರು ತಿಂಗಳ ಅವಧಿಗೆ ಅಂದರೆ ಫೆಬ್ರವರಿ 28, 2018 ರ ವರೆಗೆ ವಿಸ್ತರಿಸಲಾಗಿದೆ. ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949 ಕಲಂ 35A ರ ಉಪ ಕಲಂ (1) ಜೊತೆಗೆ ಕಲಂ 56 ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಈ ಮಾರ್ಗದರ್ಶನಗಳನ್ನು ವಿಧಿಸಿದೆ. ಭಾರತೀಯ ರಿಸರ್ವ್ ಬ್ಯಾಂಕಿನಿಂದ ನೀಡಲ್ಪಟ್ಟ ಈ ತಿದ್ದುಪಡಿ ನಿರ್ದೇಶನವು, ಈ ಬ್ಯಾಂಕಿನ ಹಣಕಾಸಿನ ಪರಿಸ್ಥಿತಿಯಲ್ಲಿ ಗಣನೀಯವಾಗಿ ಸುಧಾರಣೆಯಾಗಿ ಭಾರತೀಯ ರಿಸರ್ವ್ ಬ್ಯಾಂಕಿಗೆ ತೃಪ್ತಿದಾಯಕವಾಗಿ ತೋರಿದೆಯೆಂದು ಅರ್ಥೈಸಿಕೊಳ್ಳಬಾರದು. ಉಲ್ಲೇಖದ ಅಡಿಯಲ್ಲಿರುವ ನಿರ್ದೇಶನದ ಇತರ ನಿಯಮಗಳು ಮತ್ತು ಷರತ್ತುಗಳು ಬದಲಾಗದೆ ಹಾಗೆ ಉಳಿಯುತ್ತವೆ. ಅಜಿತ್ ಪ್ರಸಾದ್ ಪತ್ರಿಕಾ ಪ್ರಕಟಣೆ : 2017-2018/594 |
ಪೇಜ್ ಕೊನೆಯದಾಗಿ ಅಪ್ಡೇಟ್ ಆದ ದಿನಾಂಕ: