RbiSearchHeader

Press escape key to go back

Past Searches

Theme
Theme
Text Size
Text Size
S2

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78508755

ಭೊಪಾಲ್ ನಾಗರಿಕ್ ಸಹಕಾರಿ ಬ್ಯಾಂಕ್ ನಿ, ಭೊಪಾಲ್ - ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ (ಎ ಎ ಸಿ ಎಸ್) 1949 ಕಲಂ 35 A ರ ಅಡಿಯಲ್ಲಿ ವಿಧಿಸಿರುವ ನಿರ್ದೇಶನಗಳ ವಿಸ್ತರಣೆ.

02 ಆಗಸ್ಟ್ 2017

ಭೊಪಾಲ್ ನಾಗರಿಕ್ ಸಹಕಾರಿ ಬ್ಯಾಂಕ್ ನಿ, ಭೊಪಾಲ್ - ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ (ಎ ಎ ಸಿ
ಎಸ್) 1949 ಕಲಂ 35 A ರ ಅಡಿಯಲ್ಲಿ ವಿಧಿಸಿರುವ ನಿರ್ದೇಶನಗಳ ವಿಸ್ತರಣೆ.

ಭಾರತೀಯ ರಿಸರ್ವ್ ಬ್ಯಾಂಕ್ ಭೊಪಾಲ್ ನಾಗರಿಕ್ ಸಹಕಾರಿ ಬ್ಯಾಂಕ್ ನಿ, ಭೊಪಾಲ್ ಗೆ ನೀಡಿರುವ ನಿರ್ದೇಶನಗಳನ್ನು ದಿನಾಂಕ ಜುಲೈ 25, 2017 ರ ಆದೇಶದ ಅನ್ವಯ ಹೆಚ್ಚುವರಿ ಆರು ತಿಂಗಳು ಅಂದರೆ ಆಗಸ್ಟ್ 01, 2017 ದಿಂದ ಜನವರಿ 31, 2018 ರ ವರೆಗೆ ವಿಸ್ತರಿಸಲಾಗಿದೆ (ಪರಿಶೀಲನೆಗೆ ಒಳಪಡುತ್ತದೆ). ಮೇಲೆ ಸೂಚಿಸಿದ ಬ್ಯಾಂಕು ಅಕ್ಟೋಬರ್ 29, 2012 ಮತ್ತು 25 ಜನವರಿ 2017 ರಂದು ವಿಧಿಸಿದ ಮಾರ್ಗದರ್ಶನಗಳ ಅಡಿಯಲ್ಲಿತ್ತು. ಇಂತಹ ಮಾರ್ಗದರ್ಶನಗಳನ್ನು ಈ ಹಿಂದೆ ಜುಲೈ 31, 2017 ರ ವರೆಗೆ ವಿಸ್ತರಿಸಲಾಗಿತ್ತು.

ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949 (ಸಹಕಾರ ಸಂಘಗಳಿಗನ್ವಯಿಸುವಂತೆ) ಕಲಂ 35A ರ ಉಪ ಕಲಂ (1) ಜೊತೆ ಕಲಂ 56 ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಈ ಮಾರ್ಗದರ್ಶನಗಳನ್ನು ವಿಧಿಸಿದೆ. ನಿರ್ದೇಶನದ ಒಂದು ಪ್ರತಿಯನ್ನು ಬ್ಯಾಂಕ್ ಆವರಣದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರದರ್ಶಿಸಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಆದ ಮಾರ್ಗದರ್ಶನಗಳ ನೀಡಿಕೆ ಬ್ಯಾಂಕಿಂಗ್ ಪರವಾನಗಿ ರದ್ದು ಎಂದು ಅರ್ಥೈಸಿಕೊಳ್ಳಬಾರದು. ಬ್ಯಾಂಕ್ ತನ್ನ ಹಣಕಾಸಿನ ಸ್ಥಿತಿಯಲ್ಲಿ ಸುಧಾರಣೆ ಆಗುವ ತನಕ ನಿರ್ಬಂಧಗಳೊಂದಿಗೆಬ್ಯಾಂ ಕಿಂಗ್ ವ್ಯವಹಾರ ಮಾಡುತ್ತದೆ. ಸಂದರ್ಭಗಳನ್ನು ಅವಲಂಬಿಸಿ ರಿಸರ್ವ್ ಬ್ಯಾಂಕ್ ಈ ಮಾರ್ಗದರ್ಶನಗಳ ಬದಲಾವಣೆಗಳನ್ನು ಪರಿಗಣಿಸಬಹುದು.

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2017-2018/318

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?