RbiSearchHeader

Press escape key to go back

Past Searches

Theme
Theme
Text Size
Text Size
ODC_S1

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

133827885

ಪತ್ರಿಕಾ ಪ್ರಕಟಣೆ ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ತನ್ನ ಆಗಸ್ಟ್ 19, 2025 ರ ಆದೇಶದ ಮೂಲಕ ‘ಮೇಲ್ವಿಚಾರಣಾ ಕ್ರಿಯಾ ಚೌಕಟ್ಟು’ (SAF) ಅಡಿಯಲ್ಲಿ ನೀಡಿದ ನಿರ್ದಿಷ್ಟ ನಿರ್ದೇಶನಗಳ ಅನುಪಾಲನೆ ಮಾಡದೇ ಇದ್ದುದಕ್ಕಾಗಿ ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು, ಕರ್ನಾಟಕ- ಈ ಬ್ಯಾಂಕಿಗೆ (ಬ್ಯಾಂಕು) ರೂ. 50,000/- ( ರೂ. ಐವತ್ತು ಸಾವಿರ ಮಾತ್ರ ) ವಿತ್ತೀಯ ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಎ(1)(ಸಿ ) ಜೊತೆ ಓದಲಾದ ಕಲಂ 46(4) (i) ಮತ್ತು 56 ರ ಅಡಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ದಂಡವನ್ನು ವಿಧಿಸಿದೆ.

ಮಾರ್ಚ್ 31, 2024 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಯನ್ನು ಆಧರಿಸಿ ಬ್ಯಾಂಕಿನ ಶಾಸನಬದ್ಧ ನಿರೀಕ್ಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಮಾಡಿತ್ತು. ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ ಈ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಈ ಕೆಳಗಿನ ಆರೋಪ ಸ್ಥಿರಪಟ್ಟಿದೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿವೆ ಎಂದು ಗೊತ್ತಾಯಿತು:

ಮೇಲ್ವಿಚಾರಣಾ ಕ್ರಿಯಾ ಚೌಕಟ್ಟು (SAF) ಅಡಿಯಲ್ಲಿ ನೀಡಿದ ನಿರ್ದೇಶನಗಳ ಅನುಸರಣೆ ಮಾಡದೆ, ಬ್ಯಾಂಕು:

  1. ಹೆಚ್ಚಿನ ಮಟ್ಟದ ನಿಷ್ಕ್ರಿಯ ಆಸ್ತಿ (NPA)/ಸಾಲ ಹಿಂತಿರುಗಿಸುವಲ್ಲಿ ವೈಫಲ್ಯ (ಡೀಫಾಲ್ಟ್) ಇರುವ ವಲಯಗಳಿಗೆ ಉದರಿ (ಕ್ರೆಡಿಟ್) ಸೌಲಭ್ಯ ಮಂಜೂರು ಮಾಡಿತ್ತು/ ನವೀಕರಿಸಿತ್ತು;

  2. ಅವಧಿ ಠೇವಣಿಗಳ ಪೂರಕ ಭದ್ರತೆಯ ಬೆಂಬಲವಿಲ್ಲದ ಹೊಸ ಸಾಲ ಮತ್ತು ಮುಂಗಡಗಳನ್ನು ಮಂಜೂರು ಮಾಡಿತ್ತು ಮತ್ತು ವಿತರಿಸಿತ್ತು; ಮತ್ತು

  3. ಭಾರತೀಯ ಸ್ಟೇಟ್ ಬ್ಯಾಂಕ್ ಠೇವಣಿಗಳ ಮೇಲೆ ಕೊಡಮಾಡುವ ಬಡ್ಡಿಗಿಂತ ಹೆಚ್ಚಿನ ಬಡ್ಡಿದರಗಳನ್ನು ಠೇವಣಿಗಳ ಮೇಲೆ ಕೊಡಮಾಡಿತ್ತು.

ನಿಯಂತ್ರಣ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ.

(ಪುನೀತ್ ಪಾಂಚೋಲಿ)     
ಚೀಫ್ ಜನರಲ್ ಮ್ಯಾನೇಜರ್

ಪತ್ರಿಕಾ ಪ್ರಕಟಣೆ: 2025-2026/970

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?